Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಕಬಿನಿ ಜಲಾಶಯದಿಂದ 9000 ಕ್ಯೂಸೆಕ್ಸ್‌ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

Kabini reservoir

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.

ಜಲಾಶಯಕ್ಕೆ 18,000 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 9000 ಕ್ಯೂಸೆಕ್ಸ್‌ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಮತ್ತಷ್ಟು ಒಳಹರಿವು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ 9000 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80.50 ಅಡಿಗಳಾಗಿದೆ. ರಾಜ್ಯದಲ್ಲಿಯೇ ಮೊದಲು ಭರ್ತಿ ಆಗುವ ಏಕೈಕ ಜಲಾಶಯ ಇದಾಗಿದ್ದು, ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಲಿದೆ.

ಇನ್ನು ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Tags:
error: Content is protected !!