Kabini reservoir
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.
ಜಲಾಶಯಕ್ಕೆ 18,000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 9000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಮತ್ತಷ್ಟು ಒಳಹರಿವು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ 9000 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80.50 ಅಡಿಗಳಾಗಿದೆ. ರಾಜ್ಯದಲ್ಲಿಯೇ ಮೊದಲು ಭರ್ತಿ ಆಗುವ ಏಕೈಕ ಜಲಾಶಯ ಇದಾಗಿದ್ದು, ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಲಿದೆ.
ಇನ್ನು ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಜನರು ಮುನ್ನೆಚ್ಚರಿಕೆ ವಹಿಸಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…