Mysore
18
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಮೈಸೂರು ಮೆಡಿಕಲ್ ಕಾಲೇಜಿನಿಂದ ೯೫ನೇ ಪದವಿ ಪ್ರದಾನ ಸವಾರಂಭ !

ಮೈಸೂರು: ಮೈಸೂರು ಮೆಡಿಕಲ್ ಕಾಲೇಜಿನಿಂದ ೯೫ನೇ ಪದವಿ ಪ್ರದಾನ ಸವಾರಂಭವನ್ನು ಏ.೧೪ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಂಸಿ ಅಲ್ಯೂಮ್ನಿ ಅಸೋಸಿಯೇಶನ್‌  ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ೧೫೧ ಪದವಿದರರಿಗೆ ಪದವಿ ಪ್ರದಾನ ಮಾಡಲಾಗುವುದು, ಈ ಬಾರಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ಎಂಟು ಮಂದಿಗೆ ಚಿನ್ನದ ಪದಕ ಮತ್ತು ವಿಷಯವಾರು ವಿಭಾಗದಲ್ಲಿ ೧೪ ಮಂದಿಗೆ ನಗದು ಬಹುವಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಂಡಿಯನ್‌ ಸ್ಪೇಸ್ ರಿಸರ್ಚ್ ಸಂಸ್ಥೆಯ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುವಾರ್, ಮೈಸೂರು ಮೆಡಿಕಲ್ ಕಾಲೇಜಿನ ನಿರ್ದೇಶಕರು ಮತ್ತು ಡೀನ್ ಡಾ.ಕೆ.ಆರ್.ದಾಕ್ಷಾಯಿಣಿ, ಎಂಎಂಸಿ ಅಲ್ಯೂಮ್ನಿಅಸೋಸಿಯೇಶನ್‌ ಅಧ್ಯಕ್ಷ ಡಾ.ಎಚ್.ಎನ್.ದಿನೇಶ್, ಕಾರ್ಯದರ್ಶಿ ಡಾ.ಶಶಿಧರ್, ಮೈಸೂರು ಮೆಡಿಕಲ್ ಕಾಲೇಜಿನ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಸವಣ್ಣ, ವಿದ್ಯಾರ್ಥಿ ಕ್ಷೇವಾಭಿವೃದ್ಧಿ ಅಧಿಕಾರಿ ಡಾ.ಎಸ್.ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಘದ ಪದಾಧಿಕಾರಿಗಳಾದ ಡಾ.ಪಿ.ಎಲ್.ಬಸವಣ್ಣ, ಡಾ.ಅರ್ಜುನ್, ಡಾ.ಸುಮಂತ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

Tags:
error: Content is protected !!