ನಂಜನಗೂಡು : ಕೋಳಿಗಳನ್ನು ತುಂಬಿಕೊಂಡು ಬರುತ್ತಿದ್ದ ಬೊಲೆರೋ ಪಿಕಪ್ ವಾಹನ ಒಂದು ಶುದ್ಧ ನೀರಿನ ಘಟಕಕ್ಕೆ ಗುದ್ದಿದ್ದು, ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ತಾಲೂಕಿನ ಹೆಡತಲೆ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕೋಳಿ ಫಾರಂ ಒಂದರಿಂದ ಸುತ್ತಮುತ್ತಲಿನ ಗ್ರಾಮಗಳ ಅಂಗಡಿಗಳಿಗೆ ಕೋಳಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನವೆಂದು ತಿಳಿದು ಬಂದಿದೆ.
ಇದನ್ನೂ ಓದಿ:-ಬಿಗ್‌ಬಾಸ್‌ಗೆ ಅನುಮತಿ ; ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಗುರುವಾರ ಬೆಳಿಗ್ಗೆ ೭ಕ್ಕೆ ಹೆಡತಲೆ ಗ್ರಾಮಡ ಕೋಳಿ ಅಂಗಡಿಗೆ ಕೋಳಿಗಳನ್ನು ಸರಬರಾಜು ಮಾಡಲು ಬಂದಿದ್ದ ಸಂದರ್ಭದಲ್ಲಿ ಅತಿಯಾದ ವೇಗದ ಚಾಲನೆಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಿರ್ಮಾಣ ಮಾಡಿದ್ದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗುದ್ದಿದೆ. ಪರಿಣಾಮ ಘಟಕ ಜಕಂ ಗೊಂಡಿದ್ದು ಲಕ್ಷಾಂತರ ನಷ್ಟ ಉಂಟಾಗಿದೆ ಎನ್ನಲಾಗಿದೆ. ಜೊತೆಗೆ ಸ್ಥಳದಲ್ಲಿ ಯಾರು ಇಲ್ಲದ ಹಿನ್ನೆಲೆ ಯಾವುದೇ ಅವಘಡ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡ ಕವಲಂದೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…