ಮೈಸೂರು

ನೀರಿನ ಘಟಕಕ್ಕೆ ಗುದ್ದಿದ ಬೊಲೆರೋ ವಾಹನ : ತಪ್ಪಿದ ಅನಾಹುತ ; ಘಟಕ ಜಖಂ

ನಂಜನಗೂಡು : ಕೋಳಿಗಳನ್ನು ತುಂಬಿಕೊಂಡು ಬರುತ್ತಿದ್ದ ಬೊಲೆರೋ ಪಿಕಪ್ ವಾಹನ ಒಂದು ಶುದ್ಧ ನೀರಿನ ಘಟಕಕ್ಕೆ ಗುದ್ದಿದ್ದು, ಅದೃಷ್ಟವಶಾತ್‌ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ತಾಲೂಕಿನ ಹೆಡತಲೆ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕೋಳಿ ಫಾರಂ ಒಂದರಿಂದ ಸುತ್ತಮುತ್ತಲಿನ ಗ್ರಾಮಗಳ ಅಂಗಡಿಗಳಿಗೆ ಕೋಳಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನವೆಂದು ತಿಳಿದು ಬಂದಿದೆ.

ಇದನ್ನೂ ಓದಿ:-ಬಿಗ್‌ಬಾಸ್‌ಗೆ ಅನುಮತಿ ; ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಗುರುವಾರ ಬೆಳಿಗ್ಗೆ ೭ಕ್ಕೆ ಹೆಡತಲೆ ಗ್ರಾಮಡ ಕೋಳಿ ಅಂಗಡಿಗೆ ಕೋಳಿಗಳನ್ನು ಸರಬರಾಜು ಮಾಡಲು ಬಂದಿದ್ದ ಸಂದರ್ಭದಲ್ಲಿ ಅತಿಯಾದ ವೇಗದ ಚಾಲನೆಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಿರ್ಮಾಣ ಮಾಡಿದ್ದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗುದ್ದಿದೆ. ಪರಿಣಾಮ ಘಟಕ ಜಕಂ ಗೊಂಡಿದ್ದು ಲಕ್ಷಾಂತರ ನಷ್ಟ ಉಂಟಾಗಿದೆ ಎನ್ನಲಾಗಿದೆ. ಜೊತೆಗೆ ಸ್ಥಳದಲ್ಲಿ ಯಾರು ಇಲ್ಲದ ಹಿನ್ನೆಲೆ ಯಾವುದೇ ಅವಘಡ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡ ಕವಲಂದೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

2 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 hours ago