ಮೈಸೂರು

ಗರ್ಭಿಣಿ ಸಾವಿಗೆ ಕಾರಣವಾಯ್ತ ಟಿ ವಿ

ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದೇವನೂರು ಗ್ರಾಮದ ಯಮುನಾ(22) ಮೃತಪಟ್ಟ ಮಹಿಳೆ. ಅವರ ಪತಿ ದಕ್ಷಿಣಾ ಮೂರ್ತಿ ಅಲಿಯಾಸ್ ನವೀನ್ (28) ಗಂಭೀರ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ದಕ್ಷಿಣಾಮೂರ್ತಿ ಅವರು ತನ್ನ ಹೆಂಡತಿ ಗರ್ಭಿಣಿಯಾಗಿದ್ದ ಯಮುನಾ ಜೊತೆ ಬೈಕ್ ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಇಬ್ಬರೂ ಹೋಗುವ ಸಂದರ್ಭ ಬೈಕ್ ನ ಮುಂದೆ ಕೆಲವು ಲಗೇಜ್ ಇಟ್ಟುಕೊಂಡಿದ್ದ ಕಾರಣ ಬೈಕ್ ಹ್ಯಾಂಡಲ್ ತಿರುಗಿಸಲು ಆಗದೇ ಕೂಗಲೂರು ಗ್ರಾಮದ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

 

 

andolana

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

1 hour ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

1 hour ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago