ಮೈಸೂರು

ನಾಗರಹೊಳೆ ಅರಣ್ಯದಲ್ಲಿ ಗಂಡು ಹುಲಿ ಮೃತದೇಹ ಪತ್ತೆ

ಮೈಸೂರು: ನಾಗರಹೊಳೆ ಅರಣ್ಯಪ್ರದೇಶದ ಹುಣಸೂರು ವಲಯ ವ್ಯಾಪ್ತಿಯಲ್ಲಿ ಐದು ವರ್ಷದ ಗಂಡು ಹುಲಿ ಮೃತದೇಹ ಪತ್ತೆಯಾಗಿದೆ.

ಅರಣ್ಯಸಿಬ್ಬಂದಿಗಳು ಗಸ್ತು ತಿರುಗುವಾಗ ಹುಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಎರಡು ಹುಲಿಗಳ ನಡುವೆ ಕಾದಾಟ ನಡೆದು ಹುಲಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಹುಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಅರಣ್ಯ ಸಿಬ್ಬಂದಿ ಸುಟ್ಟಿಹಾಕಿದ್ದಾರೆ ಎಂದು ತಿಳಿದುಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago