ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಗ್ರಾಮದ ನಿವಾಸಿ ದಿ.ಅಂದಾನಶೆಟ್ಟರ ಪುತ್ರ.
ಮೃತರು ಮಹಾರಾಷ್ಟ್ರದ ಪಿಂಪ್ರಿಯ ಮದ್ದುಗುಂಡುಗಳ ತಯಾರಿಕೆ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು. ಆರೋಗ್ಯ ವಿಷಯ ಕುರಿತಂತೆ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು. ಲೇಖಕರು, ದಾನಿಗಳು, ಆಪ್ತ ಸಮಾಲೋಚಕರು, ಸಮಾಜ ಸೇವಕರು ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದರು. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಜನತಾ ಸೇನಾದಳ ಟ್ರಸ್ಟ್ ಕೊಡ ಮಾಡುವ ಬುದ್ದ ಭಾರತ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಮಹದೇವಪ್ಪ ಅವರು ಬದುಕಿದ್ದಾಗ ಅವರು ಇಚ್ಚೆಪಟ್ಟಿದ್ದಂತೆ ಕುಟುಂಬದವರು ಅವರ ದೇಹವನ್ನು ಗುರುವಾರ ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…