ಮೈಸೂರು : ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ನಡೆದಿದೆ.
ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ. ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂ ಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ. ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ. ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ ನೀಲಗಿರಿಮರದ ಪಟ್ಟಿಯಿಂದ ಹೊಡೆದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದ ಆಸಿಫ್ ನ ಕೆ.ಆರ್.ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಹೊಡೆದಾಟದಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಗೂ ಸಹ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್, ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ, ಎಸಿಪಿ ಶಾಂತಮಲ್ಲಪ್ಪ, ಉದಯಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜು ಭೇಟಿ ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…