Mysore
34
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ.

ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್‌ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ವಿಕೋಪಕ್ಕೆ ತಿರುಗಿದ್ದು, ಕಲಾಂನನ್ನು ತೌಹಿದ್‌ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರು ಯುವಕರು ಗಲಾಟೆ ವೇಳೆ ಗಾಂಜಾ ಸೇವಿಸಿದ್ದರು ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಕಲಾಂ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!