ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ.
ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.
ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ವಿಕೋಪಕ್ಕೆ ತಿರುಗಿದ್ದು, ಕಲಾಂನನ್ನು ತೌಹಿದ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರು ಯುವಕರು ಗಲಾಟೆ ವೇಳೆ ಗಾಂಜಾ ಸೇವಿಸಿದ್ದರು ಎನ್ನಲಾಗಿದೆ.
ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಕಲಾಂ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…