ಎಚ್.ಡಿ.ಕೋಟೆ: ಚಿಕಿತ್ಸೆಗೆ ದಾಖಲಾಗಿದ್ದರೂ ಸಹ ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳು, ಆಸ್ಪತ್ರೆಯಲ್ಲೇ ಗಲಾಟೆ ಮಾಡಿದ್ದು, ಆಸ್ಪತ್ರೆ ಸಿಬ್ಬಂದಿ ಗಲಾಟೆ ನಿಯಂತ್ರಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಇದನ್ನು ಓದಿ : ವಿರಾಜಪೇಟೆ ತಾಲ್ಲೂಕು ಆಸ್ಪತ್ರೆ ಶೀಘ್ರ ಮೇಲ್ದರ್ಜೆಗೆ
ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಾಗಮೂರ್ತಿ, ರವಿ, ನಯಾಜ್, ಅಪ್ಸರ್ ನಡುವೆ ಈ ಗಲಾಟೆ ನಡೆದಿದೆ.
ಜಮೀನಿನಲ್ಲೇ ಹಲ್ಲೆ-ಪ್ರತಿಹಲ್ಲೆ ನಡೆದಿದ್ದು, ಗಾಯಗೊಂಡಿದ್ದ ನಾಗಮೂರ್ತಿ ಹಾಗೂ ರವಿ ಎಂಬುವವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಗೆ ಬಂದ ನಯಾಜ್ ಹಾಗೂ ಅಪ್ಸರ್ ಸೇರಿದಂತೆ ಇತರರು ನಾಗಮೂರ್ತಿ ಹಾಗೂ ರವಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಸಂಬಂಧ ನಯಾಜ್ ಹಾಗೂ ಅಪ್ಸರ್ ಸೇರಿದಂತೆ ಒಂದೇ ಗುಂಪಿನ 13 ಮಂದಿ ವಿರುದ್ಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…