Mysore
28
light rain

Social Media

ಗುರುವಾರ, 11 ಜೂನ್ 2026
Light
Dark

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು@ ಶಿವಕುಮಾರ್ ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ 16 ವರ್ಷದ ಮೃತ ಬಾಲಕಿ ನಂಜನಗೂಡು ನಗರದ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಇಂದು ಫಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದ ತ್ರಿಶಾಲ, ನಾನು ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ. ಬಾಲಕಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ.

 

Tags:
error: Content is protected !!