ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು@ ಶಿವಕುಮಾರ್ ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ 16 ವರ್ಷದ ಮೃತ ಬಾಲಕಿ ನಂಜನಗೂಡು ನಗರದ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಇಂದು ಫಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದ ತ್ರಿಶಾಲ, ನಾನು ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ. ಬಾಲಕಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…