ಮೈಸೂರು

ಕಬಿನಿ ಹಿನ್ನೀರಿನಲ್ಲಿ ಹಸಿರು ಹುಲ್ಲು ತಿನ್ನುತ್ತಿರುವ ಆನೆಗಳ ಹಿಂಡು: ಪ್ರವಾಸಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆ

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆಯ ದಮ್ಮನಕಟ್ಟೆ ಸಫಾರಿಯ ವೇಳೆ ಕಬಿನಿ ಹಿನ್ನೀರಿನಲ್ಲಿ ಆನೆಗಳ ಹಿಂಡು ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

ಎಚ್.ಡಿ.ಕೋಟೆ ಭಾಗದಲ್ಲಿ ಕಳೆದ ಕೆಲ ದಿನಗಳ ಹಿಂದೆ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾಡಿನಲ್ಲಿ ಹಸಿರು ಮೇವು ಚಿಗುರೊಡೆದಿದೆ. ಈ ಹಿನ್ನೆಲೆಯಲ್ಲಿ ಆನೆ, ಜಿಂಕೆ, ಮೊಲ ಸೇರಿದಂತೆ ಅನೇಕ ಪ್ರಾಣಿಗಳು ಕಬಿನಿ ಹಿನ್ನೀರಿನ ಬಳಿ ಹಸಿರು ಹುಲ್ಲನ್ನು ಮೇಯಲು ಧಾವಿಸುತ್ತವೆ.

ಈ ವೇಳೆ ಸಫಾರಿಗೆ ತೆರಳುವ ಪ್ರವಾಸಿಗರು ವನ್ಯಜೀವಿಗಳ ಚಲನವಲನವನ್ನು ತಮ್ಮ ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡುತ್ತಾರೆ.

ಆನೆಗಳು ಮರಿಯಾನೆಗಳ ಜೊತೆ ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಈಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಹೆಚ್ಚು ಹೆಚ್ಚು ಪ್ರಾಣಿಗಳು ಪ್ರವಾಸಿಗರ ಕಣ್ಣಿಗೆ ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅರಣ್ಯ ಸಫಾರಿಗೆ ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

50 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

1 hour ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

2 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago