Mysore
34
clear sky

Social Media

ಶುಕ್ರವಾರ, 14 ಮಾರ್ಚ್ 2025
Light
Dark

ನಂಜನಗೂಡಿನಲ್ಲಿ ಪಾಳುಬಿದ್ದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ

ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಅದೃಷ್ಟವಶಾತ್‌ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಹಲವು ವರ್ಷಗಳಿಂದ ಈ ಹೆಂಚಿನ ಮನೆ ಪಾಳು ಬಿದ್ದಿತ್ತು. ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಪಕ್ಕದ ಮನೆಗೂ ಬೆಂಕಿಯ ಕಾವು ತಗುಲಿದ್ದು, ಆದರೂ ಅಕ್ಕಪಕ್ಕದಲ್ಲಿದ್ದ ಸ್ಥಳೀಯರು ಅಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವ್ಯಕ್ತಿಗಳು ಪಾಳುಬಿದ್ದ ಮನೆಯಲ್ಲಿ ಧೂಮಪಾನ ಮಾಡಿರುವ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

 

Tags: