ಮೈಸೂರು : ರಾಜ ವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಅರಮನೆಯ ಅಂಬಾವಿಲಾಸ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಇಂದು ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಯಿತು.
ಅ. 15 ರಿಂದ ಅ. 48 ರ ವರೆಗೆ ಅರಮನೆಯಲ್ಲಿ ರಾಜ ಪರಂಪರೆಯಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶರನ್ನವರಾತ್ರಿಯ ಪೂಜಾ ಕೈಂಕರ್ಯಗಳನ್ನ ರಾಜ ಪರಂಪರೆಯಂತೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಲಗ್ನದಲ್ಲಿ ಸಿಂಹಾಸನವನ್ನು ಅರಮನೆಯ ಅಂಬಾ ವಿಲಾಸ ದರ್ಬಾರ್ ಹಾಲ್‌ನಲ್ಲಿ ಜೋಡಿಸಲಾಯಿತು.
ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಪೂಜೆ ಸಲ್ಲಿಸಿ ಅ. 15 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದ 6.25 ರ ಶುಭ ಮುಹೂರ್ತದಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಸಿಂಹ ಜೋಡಣೆ ಆಗುತ್ತದೆ. ಆನಂತರ ಅಂದು ಯಧುವೀರ್ ಹಾಗೂ ತ್ರಿಷಿಕಾ ಒಡೆಯರ್‌ಗೆ ಕಂಕಣ ಧಾರಣೆ ನಡೆಯುತ್ತದೆ. ಬಳಿಕ ಶರನ್ನವರಾತ್ರಿಯ ಪೂಜೆಗಳು ಆರಂಭವಾಗಿ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಕುದುರೆ, ಹಸುಗಳು ಆಗಮಿಸುತ್ತವೆ. ಅ. 15ರ 10:25ಕ್ಕೆ ಸಿಂಹಾಸನ ಪೂಜೆ ನೆರವೇರಿಸಿ ಬಳಿಕ ರಾಜ ವಂಶಸ್ಥರ ರಾಜ ಪರಂಪರೆಯಂತೆ ಅಂದು ಖಾಸಗಿ ದರ್ಬಾರ್ ನಡೆಯಲಿದೆ. ಕೊನೆಗೆ, ಅ. 24ರ ವರೆಗೆ ಪ್ರತಿನಿತ್ಯ ಖಾಸಗಿ ದರ್ಬಾರ್ ನಡೆಸುವ ರಾಜ ವಂಶಸ್ಥರಾದ ಯಧುವೀರ್, ವಿಜಯದಶಮಿ ದಿನ ಸಂಜೆ ಕೊನೆಯ ದಿನದ ಖಾಸಗಿ ದರ್ಬಾರ್ ನಡೆಸಿ, ಸಿಂಹಾಸನದಿಂದ ಸಿಂಹ ವಿಸರ್ಜನೆ ಮಾಡಿ, ಶರನ್ನವರಾತ್ರಿಯ ಪೂಜೆಗಳನ್ನು ಕೊನೆಗೊಳಿಸುತ್ತಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…