ಮೈಸೂರು

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಮನವಿ ಮಾಡಿದ್ದಾರೆ.

ಖ್ಯಾತ ಗಾಯಕಿ ಎಸ್‌. ಜಾನಕಿಯವರ ಅಗಲಿಕೆ ಬಗ್ಗೆ ಅವರು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಈ ವೇಳೆ, ಜಾನಕಿ ಅಂದ್ರೆ ಸೀತೆ. ಸೀತೆ ಅಂದ್ರೆ ನಮಗೆ ಗೀತೆ. ಆಕೆಯ ಆಸೆ ಕರುನಾಡಿನಲ್ಲಿ ಇರೋದು. ನಾವು ಅದಕ್ಕೆ ಇಂಬು ಕೋಡೋದು ಬೇಡವೇ? ಅವರ ಸ್ಮಾರಕ ಆಗಬೇಕು. ಇದನ್ನು ಸಂಬಂಧಪಟ್ಟವರ ಗಮನಕ್ಕೆ ತರೋಣ ಎಂದು ಕರೆ ನೀಡಿದ್ದಾರೆ.

ಜಾನಕಿಯವರದ್ದು ಪರಿಪೂರ್ಣ ಜೀವನ, 88 ವರ್ಷ ಪೂರೈಸಿದ್ದಾರೆ. ಅವರು ದೇವರ ಭಕ್ತರು. ಸಂಗೀತ ಎಂಬುದು ದೇವರು, ಸಂಗೀತ ಎಲ್ಲಾ ದೇವರಿಗೆ ಪ್ರಿಯ. ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ದೇವರ ಭಕ್ತರು. ಅವರಿಗೆ ಜಾನಕಿಯವರ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಜು.11 ರಂದು ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಆಪ್ತರ ಮನೆಯಲ್ಲಿ ಎಸ್‌.ಜಾನಕಿ ಅವರು ವಾಸವಾಗಿದ್ದರು.

80ರ ದಶಕದಲ್ಲಿ ʼಜಾನಕಮ್ಮʼ ಜನಪ್ರಿಯತೆ ಗಳಿಸಿದ್ದರು. ʼಭಾರತದ ನೈಟಿಂಗೇಲ್‌ʼ ಅಂತಲೇ ಹೆಸರುವಾಸಿಯಾಗಿದ್ದರು. ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದರು. ಆಂಧ್ರಪ್ರದೇಶದಲ್ಲಿ ಜನಿಸಿದ್ದರೂ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹೊಂದಿದ್ದರು. ಅಲ್ಲದೇ, ಕನ್ನಡದಲ್ಲೇ ಹೆಚ್ಚು ಹಾಡುಗಳನ್ನು ಹಾಡಿದ್ದರು. 4 ರಾಷ್ಟ್ರೀಯ ಪ್ರಶಸ್ತಿ, 33 ವಿವಿಧ ರಾಜ್ಯ ಪ್ರಶಸ್ತಿ, ಮೈಸೂರು ವಿವಿ ಗೌರವ ಡಾಕ್ಟರೇಟ್‌, ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago