ಮೈಸೂರು : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯನ್ನು ಪೊಲೀಸ್ ದಫೇದಾರ್ ಸಾ.ನಾ.ಗೋವಿಂದರಾಜು ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೃಹಿಣಿಯೊಬ್ಬರು ಮದ್ಯರಾತ್ರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ತಾನು ಬದುಕಬೇಕೆಂಬ ಆಸೆಯಿಂದ ಅಸ್ವಸ್ಥ ಗೃಹಿಣಿ ಆಂಬುಲೆನ್ಸ್‌ಗೆ ದೂರವಾಣಿ ಕರೆ ಮಾಡಿದ್ದಾರೆ. ಎಷ್ಟು ಪ್ರಯತ್ನಿಸಿದರೂ ಆಂಬುಲೆನ್ಸ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ 112ರ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದಾರೆ. ನನ್ನನ್ನು ಬದುಕಿಸಿ, ನಾನು ಆತ್ಮಹತ್ಯೆ ಮಾಡಿಕೊಳ್ಳಲು ವಿಷ ಸೇವಿಸಿದ್ದೇನೆ. ನನ್ನ ಗಂಡ ನನ್ನನ್ನು ಆಸ್ಪತ್ರೆಗೆ ಹೋಗಲು ಬಿಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ತಕ್ಷಣ ಹೆಡ್ ಕಾನ್ಸ್‌ಟೇಬಲ್ ಗೋವಿಂದರಾಜ್ ಅವರು, ದೂರುದಾರೆ ಮಂಜುಳಾ ದೇವರಾಜ್ ಅವರ ಯರಹಳ್ಳಿ, ಕಾವಲ್ ನಲ್ಲಿರುವ ಮನೆಗೆ ಹೋಗಿ ಆಕೆಯನ್ನು ರಕ್ಷಿಸಿದ್ದಾರೆ. ತಕ್ಷಣ ಅವರನ್ನು ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲು ಮಾಡಿ ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ದಫೇದಾರ್ ಸಾ.ನಾ.ಗೋವಿಂದರಾಜು ಕೆಲಸಕ್ಕೆ ತಾಲ್ಲೂಕಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…