ಮೈಸೂರು: ಸಿದ್ದರಾಮಯ್ಯ ಮತ್ತು ಮಹದೇವಪ್ಪ ನಡುವೆ ಮುನಿಸು ಮೂಡಿದೆ ಎಂಬ ವರದಿಗಳಿಗೆ ಸಂಸದ ಸುನಿಲ್ ಬೋಸ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಇಬ್ಬರದ್ದು 40 ವರ್ಷಗಳ ಗೆಳೆತನ. ಮುನಿಸಿಕೊಳ್ಳಲು ಯಾವುದೇ ಕಾರಣವಿಲ್ಲ ಎಂದು ಹೇಳಿದ್ದಾರೆ.
ಮಹದೇವಪ್ಪ ಅವರಿಗೆ ವೈರಲ್ ಜ್ವರ ಇದ್ದುದರಿಂದ ಪೂರ್ವಭಾವಿ ಸಭೆಗೆ ಹಾಜರಾಗಿರಲಿಲ್ಲ. ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಬರುವುದಾಗಿ ಅವರೇ ಹೇಳಿದ್ದಾರೆ ಎಂದು ಬೋಸ್ ತಿಳಿಸಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಇಬ್ಬರೂ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಸುನಿಲ್ ಬೋಸ್ ಹೇಳಿದ್ದಾರೆ




