ಮೈಸೂರು

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ.

ಇಂದು ಬೆಳಿಗ್ಗೆಯಿಂದಲೂ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಇನ್ನು ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಂಜುಂಡೇಶ್ವರ ದೇವಸ್ಥಾನದ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.

ದೇವಸ್ಥಾನದ ನದಿಯ ದಡದಲ್ಲಿದ್ದ ಬಸ್ ನಿಲ್ದಾಣವನ್ನು ಈಗ ಸಮೀಪದ ಮಾರ್ಗದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.

ಬ್ಯಾರಿಕೇಡ್ ಅಳವಡಿಸಿ ಪೊಲೀಸರಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 300 ಮೀಟರ್ ಅಂತರದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.

ಇಂದು ಸಂಜೆ ಹಾಗೂ ರಾತ್ರಿ ದೇವಸ್ಥಾನ ಆವರಣದಲ್ಲಿ ಹಲವು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿಯಿಡಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣ ನಿಲ್ದಾಣದಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

49 seconds ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

14 mins ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

3 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

4 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

5 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

5 hours ago