ಮೈಸೂರು

ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ

ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ ರಾಂಪುರ ಗ್ರಾಮದಲ್ಲಿ ಒಂದೇ ರಾತ್ರಿ ಐದು ಕಡೆ ಸರಣಿ ಕಳ್ಳತನ ನಡೆದಿದೆ. ನಗದು ಮತ್ತು ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ಶಿವಕುಮಾರ್ ಎಂಬುವವರ ಪತ್ನಿ ಭವಾನಿ ಅವರ ಮಾಂಗಲ್ಯ ಸರ ಕಳ್ಳತನವಾಗಿದೆ.

ಮನೆಯಲ್ಲಿ ಮಲಗಿರುವಾಗ ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು ಭವಾನಿಯವರ ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಬೆಳೆಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಸೋಮಪ್ಪ ಎಂಬುವವರ ಮನೆಯಲ್ಲಿ ಎರಡು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ 5 ಗ್ರಾಂ ಮಾಂಗಲ್ಯ ಮತ್ತು 40 ಸಾವಿರ ಹಣ ಕಳ್ಳತನವಾಗಿದೆ. ಹಾಗೂ ಕಾಡಯ್ಯ ಮತ್ತು ರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗೇಂದ್ರ ಎಂಬುವರ ಪಂಪ್ ಹೌಸ್​ನಲ್ಲಿ ಬಾಗಿಲು ಮುರಿದು ಬೆಳೆಬಾಳುವ ವಸ್ತುಗಳನ್ನು ದೋಚಲಾಗಿದೆ. ಕಳ್ಳರನ್ನು ಬಂಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

lokesh

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

3 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

14 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

32 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

55 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago