ಮೈಸೂರು

ಮೈಸೂರು: ವೈದ್ಯರ ನಿರ್ಲಕ್ಷ್ಯಕ್ಕೆ 6 ವರ್ಷದ ಬಾಲಕಿ ಮೃತ

ಮೈಸೂರು: ಮೈಸೂರಲ್ಲಿ ವೈದ್ಯರ ನಿರ್ಲಕ್ಷಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎಚ್‌ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಬೆಳಗನಹಳ್ಳಿಯ ಶಿವರಾಜ್ ಎಂಬುವವರ ಪುತ್ರಿ ತನುಷ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿಬಂದಿದೆ. ನಿನ್ನೆ ಬಾಲಕಿಗೆ ವಾಂತಿ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿ ಪಾಳಿಯ ವೈದ್ಯರು ಬಾಲಕಿ ತನುಷಾಗೆ ಚಿಕಿತ್ಸೆ ನೀಡಿದ್ದರು.

ಇಂದು ಬೆಳಿಗ್ಗೆ ಚೆನ್ನಾಗೇ ಇದ್ದ ಬಾಲಕಿ ತನುಷ ದಿಢೀರನೆ ಸಾವನಪ್ಪಿದ್ದಾಳೆ. ತನುಷ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಪೋಷಕರು ಇದೀಗ ಆರೋಪಿಸುತ್ತಿದ್ದು, ಆರೋಗ್ಯ ಕೇಂದ್ರಕ್ಕೆ ಟಿ ಎಚ್ ಓ ಡಾ. ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಟಿಎಚ್‌ಓ ಭರವಸೆ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

42 mins ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

4 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

4 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago