ಮೈಸೂರು : ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ನಾಯಕ್ ಸುಬೇದಾರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.
ಪುತ್ರಿ ಪ್ರಕೃತಿಯ 5 ನೇ ವರ್ಷದ ಹುಟ್ಟುಹಬ್ಬ ಆಚರಿಸಲು ಯೋಧ ಸುರೇಶ್ ಹೊಸ ಅಗ್ರಹಾರ ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲದೆ, ಜನ್ಮದಿನಾಚರಣೆ ಅಂಗವಾಗಿ ಡೋರ್ನಹಳ್ಳಿಯ ಅನಾಥಾಶ್ರಮಕ್ಕೆ ಊಟ ನೀಡಲೆಂದು ಸಿದ್ಧರಾಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ.
ಕೂಡಲೇ ಸುರೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾದರಿ ಮಧ್ಯೆ ಕೊನೆಯುಸಿರೆಳೆದರು. ಗಾಳಿಯಲ್ಲಿ ಗುಂಡು ಹಾರಿಸಿ ಯೋಧರು ಗೌರವ ಸಲ್ಲಿಸಿದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…