ಮೈಸೂರು: ಇಲ್ಲಿನ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿರುವ ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆಗೆ ಕೃಷ್ಣಶಿಲೆ ಸಿಕ್ಕ ಸ್ಥಳದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೃಷ್ಣಶಿಲೆಗೂ ವಿಶೇಷ ಪೂಜೆ ಸಲ್ಲಿಸಿದರು.
ಎಚ್.ರಾಮದಾಸ್ ಅವರ ಜಮೀನಿನಲ್ಲಿ ದೊರೆತ ಶಿಲೆಯನ್ನು ಕಳೆದ ಎರಡು ವರ್ಷದ ಹಿಂದೆ ಅಯೋಧ್ಯೆಗೆ ಕಳುಹಿಸಲಾಗಿತ್ತು. ಆ ಶಿಲೆಯಿಂದಲೇ ಶಿಲ್ಪಿ ಅರುಣ್ ಯೋಗಿರಾಜ್ ಅವರು ಬಾಲರಾಮನ ಮೂರ್ತಿಯನ್ನು ಕೆತ್ತಿದರು. 2024ರ ಜನವರಿ.22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು.