ಮೈಸೂರು

ಏ. 2 ರಂದು ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆ : ನಂಜನಗೂಡಿನಲ್ಲಿ ಹಬ್ಬದ ವಾತಾವರಣ

ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ ರಥಾರೋಹಣ ನೆರವೇರಲಿದ್ದು, ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದ್ದು, ತೆಪ್ಪೋತ್ಸವದಲ್ಲೂ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಗೌತಮ ರಥದ ಆಕರ್ಷಣೆ : ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್‌ ಚಕ್ರಗಳನ್ನು ಒಳಗೊಂಡಿದೆ.

ನೆಲದಿಂದ ಸುಮಾರು 90 ಅಡಿ ಎತ್ತರದ ಬೃಹತ್‌ ರಥ ಅಂದಾಜು 110 ಟನ್‌ ತೂಕವನ್ನು ಹೊಂದಿದೆ. ಗೌತಮ ರಥದ ಉತ್ಸವ ಮಂಟಪ ವಿಶಿಷ್ಟ ಕಲಾ ಕೆತ್ತನೆಯಿಂದ ಕೂಡಿದ್ದು, ಜಾತ್ರೆ ಸಂದರ್ಭ ನಾನಾ ಬಣ್ಣಗಳ ವಸ್ತ್ರಗಳು, ವಿವಿಧ ಬಗೆಯ ಪುಷ್ಪಗಳು ಹಾಗೂ ಬಣ್ಣದ ಧ್ವಜಗಳನ್ನು ರಥಕ್ಕೆ ಕಟ್ಟಿ ಸಿಂಗರಿಸಲಾಗುತ್ತದೆ. 1.5 ಕಿ.ಮೀ ಉದ್ದದ ರಥಬೀದಿಯಲ್ಲಿ ಒಂದು ಸುತ್ತು ಐದೂ ರಥಗಳನ್ನು ಎಳೆಯುವ ಮೂಲಕ ಭಕ್ತಾಗಳು

ಸಂಭ್ರಮಿಸಲಿದ್ದಾರೆ ಜಾತ್ರೆಯ ಸಿದ್ಧತೆ : ಜಾತ್ರಾ ಮಹೋತ್ಸವದ ಪ್ರಯುಕ್ತ ಗೌತಮ ರಥ ಹಾಗೂ ಪಾರ್ವತಮ್ಮನವರು ಆಸೀನರಾಗುವ ಚಿಕ್ಕರಥದ ಗಾಲಿಗಳನ್ನು ದುರಸ್ತಿಪಡಿಸಿ ಐದೂ ರಥಗಳಿಗೆ ಬಣ್ಣ ಬಳಿಯಲಾಗಿದೆ. ಜೊತೆಗೆ ದೊಡ್ಡ ರಥವನ್ನು ಎಳೆಯಲು ನೆರವಾಗುವಂತೆ 300 ಅಡಿ ಉದ್ದದ ಬೃಹತ್‌ ಹಗ್ಗವನ್ನು ಖರೀದಿಸಿ ರಥಕ್ಕೆ ಅಳವಡಿಸಲಾಗಿದೆ.

ಇನ್ನು ಜಾತ್ರೆಗೆ ಲಕ್ಷಕ್ಕೂ ಹೆಚ್ಚು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸುವ ಕಾರ‍್ಯ ಪೂರ್ಣಗೊಂಡಿದೆ.

ಜನ ನಿಬಿಡ ಸ್ಥಳಗಳಲ್ಲಿ ಪೊಲೀಸ್‌ ವಾಚ್‌ ಟವರ್‌ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ ಜಾತ್ರೆಯ ಸಲುವಾಗಿ ಆಗಮಿಸುವ ನಂಜನಗೂಡಿಗೆ ಆಗಮಿಸುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕೆಎಸ್‌ಆರ್‌ಟಿಸಿ ಮೂಲಕ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

lokesh

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

11 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago