ಮೈಸೂರು: ಕಾಲುವೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಲವತ್ತ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಕಳಸ್ತವಾಡಿ ಗ್ರಾಮದ ನಿಶಾಲ್ (17) ಮೃತಪಟ್ಟ ಬಾಲಕ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಶುಕ್ರವಾರ ಮಧ್ಯಾಹ್ನ ಬೆಲವತ್ತ ಗ್ರಾಮದ ಬಳಿಯ ವರುಣಾ ಕಾಲುವೆಗೆ ಈಜಲು ಹೋಗಿದ್ದು, ನೀರಿನಲ್ಲಿ ಮಳುಗಿ ಸಾವನ್ನಪ್ಪಿದ್ದಾನೆ. ಶನಿವಾರ ಬೆಳಿಗ್ಗೆ ರಮ್ಮನಹಳ್ಳಿ ಬಳಿಯ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





