Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದುಬಾರಿ ಬೆಲೆಯ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳನ ಬಂಧನ

ಮೈಸೂರು : ದುಬಾರಿ ಬೆಲೆಯ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಬು ದುಬಾರಿ ಬೆಲೆಯ ಕಾರುಗಳನ್ನು ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ. ಮಾಜಿ ಸಚಿವ ಶಿವಣ್ಣ ಸೇರಿದಂತೆ ಹಲವರ ಐಶಾರಾಮಿ ಕಾರುಗಳನ್ನು ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ. ಸದ್ಯ ಈ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಆರೋಪಿ ಬಾಬು ಕಳ್ಳತನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು, ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ 3 ಕಾರು, ಚಿನ್ನಾಭರಣ, ದುಬಾರಿ ವಾಚ್‌ಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಆರೋಪಿ ಬಾಬು ಕಾರುಗಳ ಜೊತೆ ಮನೆಗಳ್ಳತನವೂ ಮಾಡುತ್ತಿದ್ದ ಎಂಬ ಬಗ್ಗೆ ತನಿಖೆ ವೇಳೆ ತಿಳಿದು ಬಂದಿದೆ. ಮತ್ತಷ್ಟು ಪ್ರಕರಣದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ