ಮೈಸೂರು : ದುಬಾರಿ ಬೆಲೆಯ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಬಾಬು ಎಂಬ ಕಳ್ಳನನ್ನು ಮೈಸೂರಿನ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಬು ದುಬಾರಿ ಬೆಲೆಯ ಕಾರುಗಳನ್ನು ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ. ಮಾಜಿ ಸಚಿವ ಶಿವಣ್ಣ ಸೇರಿದಂತೆ ಹಲವರ ಐಶಾರಾಮಿ ಕಾರುಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಸದ್ಯ ಈ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಆರೋಪಿ ಬಾಬು ಕಳ್ಳತನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು, ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ 3 ಕಾರು, ಚಿನ್ನಾಭರಣ, ದುಬಾರಿ ವಾಚ್‌ಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಆರೋಪಿ ಬಾಬು ಕಾರುಗಳ ಜೊತೆ ಮನೆಗಳ್ಳತನವೂ ಮಾಡುತ್ತಿದ್ದ ಎಂಬ ಬಗ್ಗೆ ತನಿಖೆ ವೇಳೆ ತಿಳಿದು ಬಂದಿದೆ. ಮತ್ತಷ್ಟು ಪ್ರಕರಣದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…