ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು.
ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ ಗಮಕಿ ಕೃ.ರಾಮಚಂದ್ರ ಅವರ ಅಭಿನಂದನಾ ಕಾರ್ಯಕ್ರಮವನ್ನು ನಗರದ ಜೆಎಲ್ ಬಿ ರಸ್ತೆಯ ಬಳಿ ಇರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತವೂ ಸೇರಿದಂತೆ ಜಗತ್ತಿನ ಯಾವ ಭಾಷೆಯಲ್ಲೂ ಇಲ್ಲದ ಷಟ್ಪದಿ ಸಾಹಿತ್ಯ ಕನ್ನಡ ಭಾಷೆಯಲ್ಲಿರುವುದು ಕನ್ನಡ ಸಾಹಿತ್ಯದ ವಿಶೇಷವಾಗಿದೆ ಎಂದರು.
ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ಸಾಹಿತ್ಯ ಇರುವುದರಿಂದಲೇ ವೈಶಿಷ್ಟ್ಯ ಪೂರ್ಣವಾಗಿ ಗಮಕ ಕಲೆ ಬೆಳೆದಿದೆ. ಗಮಕ ಕಲೆಯಲ್ಲಿ ಗಾಯನಕ್ಕೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಈ ಕಲೆಯಲ್ಲಿ ಒಂದೊಂದು ಅಕ್ಷರವನ್ನೂ ಗಮನದಲ್ಲಿಟ್ಟುಕೊಂಡು ಉಚ್ಚಾರಣೆ ಮಾಡಬೇಕು. ಗಮಕವನ್ನು ಹಾಡುವುದರ ಜೊತೆಗೆ ವ್ಯಾಖ್ಯಾನ ಮಾಡುವುದೂ ಅಷ್ಟೇ ಮುಖ್ಯವಾಗಿದೆ. ಇಂತಹ ಶ್ರೇಷ್ಠವಾದ ಗಮಕ ಕಲೆಯನ್ನು ಬೆಳೆಸುವಲ್ಲಿ ಕೃ. ರಾಮಚಂದ್ರ ಅವರ ಪಾತ್ರ ದೊಡ್ಡದಿದೆ ಎಂದು ಅವರು ತಿಳಿಸಿದರು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಗಮಕ ಕಲೆಯು, ಸಾಹಿತ್ಯವನ್ನು ಅರ್ಥ ಮಾಡಿಕೊಳ್ಳಲು ಇರುವ ಒಂದು ಮಾಧ್ಯಮವಾಗಿದೆ. ಎಲ್ಲಾ ಕೃತಿಗಳನ್ನು ಓದಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಗಮಕವಾಚನ ಮತ್ತು ವ್ಯಾಖ್ಯಾನವನ್ನು ಕೇಳಿದಾಗ ಕೃತೀಯ ಆಶಯ ಅರ್ಥವಾಗುತ್ತದೆ. ಗಮಕ ಕಲೆ ಸಂಗೀತ ಮತ್ತು ಸಾಹಿತ್ಯದ ಸಮನ್ವಯ ರೂಪವಾಗಿದೆ ಎಂದು ಅವರು ಬಣ್ಣಿಸಿದರು.
ಇದೇ ಸಂದರ್ಭದಲ್ಲಿ ಗಮಕಿ ಕೃ.ರಾಮಚಂದ್ರ ಮತ್ತು ತುಳಸಿ ರಾಮಚಂದ್ರ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ನಾಡೋಜ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…