Mysore
26
few clouds

Social Media

ಶನಿವಾರ, 30 ಮೇ 2026
Light
Dark

ನಂಜನಗೂಡು| ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಭಿವೃದ್ಧಿ ಕಾಣದ ಗ್ರಾಮ‌

road

ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಮಳೆ ಬಂದರಂತೂ ಗ್ರಾಮದ ರಸ್ತೆಯು ಕೆಸರುಮಯವಾಗಲಿದ್ದು, ಓಡಾಡಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಸರಿಪಡಿಸುವಂತೆ ಹತ್ತಾರು ಬಾರಿ‌ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಕೆಸರು ರಸ್ತೆಯಲ್ಲಿ ಹಲವರು ಬಿದ್ದು ಗಾಯಗೊಂಡಿರಿವ ಘಟನೆ ಕೂಡ ನಡೆದಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನಪ್ರತಿನಿಧಿಗಳು ಮತ ಕೇಳಲು ಮನೆ ಬಾಗಿಲಿಗೆ ಬರುತ್ತಾರೆ. ಆದರೆ ನಮ್ಮ ಕಷ್ಟ ಕೇಳಲು ಯಾರೂ ಕೂಡ ಬರುವುದಿಲ್ಲ. ರಸ್ತೆ ಅಭಿವೃದ್ಧಿ ಮಾಡುವ ತನಕ ಚುನಾವಣೆಯಲ್ಲಿ ಮತಚಲಾಯಿಸಲ್ಲ ಎಂದು ರಾಜ್ಯ ಸರ್ಕಾರಕ್ಕೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!