ಮೈಸೂರು

ಸಾಲಭಾದೆಗೆ ಬೇಸತ್ತು ಯುವಕ ನೇಣಿಗೆ ಶರಣು..!

ಮೈಸೂರು : ಸಾಲಭಾದೆ ತಾಳಲಾರದೆ ಡೆತ್‌ ನೋಟ್‌ ಬರೆದಿಟ್ಟು ಯುವಕ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಕೆಆರ್‌ ತಾಲೂಕಿನ ಹೆಬ್ಬಾಲು ಕೊಪ್ಪಲು ಗ್ರಾಮದ  ಯತೀಕ್‌ (೨೫) ಎಂಬ ಯುವಕ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡ್ತಿದ್ದ ಯತೀಕ್‌ ಮನೆಯ ಸಮಸ್ಯೆ ಹಿನ್ನೆಲೆ ಕ್ರೆಡಿಟ್‌ ಕಾರ್ಡ್‌ ,ಪರ್ಸನಲ್‌ ಲೋನ್ ಪಡೆದಿದ್ದ. ಆದರೆ ಇಎಂಐ ಕಟ್ಟಲು ಸಾಧ್ಯವಾಗದ ಹಿನ್ನೆಲೆ ಸೂಸೈಡ್‌ ಮಾಡಿಕೊಂಡಿದ್ದಾನೆ. ಬೆಟ್ಟದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

11 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

12 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

12 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago