ಎಚ್.ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್‍ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಗಳ ಪುತ್ರ ರವೀಶ್ ಎಂಬಾತನೆ ಸಾವಿಗೀಡಾದ ಯುವಕ.
ಜೀವನಕ್ಕಾಗಿ ಮೃತ ರವೀಶ್ ಗೂಡ್ಸ್ ಆಟೋ ಓಡಿಸುತ್ತಿದ್ದು ಹೆತ್ತವರು ಕೂಡ ಈತನನ್ನೇ ನಂಬಿಕೊಂಡಿದ್ಧು, ಹೊಸ ಮನೆ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮೋಟಾರ್ ಆನ್ ಮಾಡುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕೂಡಲೆ ಸ್ಥಳೀಯರು ಎಚ್ ಡಿ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸರಾದರೂ ಅದಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ನಂತರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಎದೆಯೆತ್ತರ ಬೆಳೆದ ಮಗನನ್ನು ಕಳೆದುಕೊಂಡ ಪೋಷಕರು ದಿಕ್ಕು ತೋಚದೆ ಕಣ್ಣೀರಿಡುತ್ತಿದ್ದರೆ ಇತ್ತ ಸಂಬಂಧಿಕರು ಮತ್ತು ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟುವಂತಿತ್ತು,
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…