ತಿ.ನರಸೀಪುರ : ನವೆಂಬರ್ 11ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಕುರಿತು ತಾಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯು ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಸಿ.ಜಿ. ಗೀತಾ ಅಧ್ಯಕ್ಷತೆಯಲ್ಲಿ ಕರೆದಿದ್ದ ಕನಕದಾಸ ಜಯಂತಿ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯು ತಾಲೂಕು ಮಟ್ಟದ ಅಧಿಕಾರಿಗಳ ಬಹುತೇಕ ಗೈರುಹಾಜರಿಯಿಂದ ಮುಂದೂಡಲಾಯಿತು.
ಸಭೆ ಪ್ರಾರಂಭವಾಗುತ್ತಿದ್ದಂತೆ ಮಾಜಿ ತಾ. ಪಂ.ಉಪಾಧ್ಯಕ್ಷ ಬಿ. ಮರಯ್ಯ ಪ್ರತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಭೆ ಮತ್ತು ಇನ್ನಿತರ ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ನಿರಂತರ ಗೈರುಹಾಜರಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ತಾಲೂಕು ಮಟ್ಟದ ಸಭೆಗಳಿಗೆ ಗೈರಾಗುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಹಾಗಾಗಿ ಈ ಸಭೆಯನ್ನು ಬಹಿಷ್ಕರಿಸುತ್ತೇನೆ ಎಂದು ಸಭೆಯಿಂದ ಹೊರನಡೆದರು.ಸಭೆಯಲ್ಲಿ ಹಾಜರಿದ್ದ ಎಲ್ಲ ಸಮುದಾಯದ ಮುಖಂಡರು ಅವರ ಅಭಿಪ್ರಾಯಕ್ಕೆ ಧ್ವನಿಗೂಡಿಸಿ ಸಭೆ ಬಹಿಷ್ಕರಿಸಿ ಹೊರನಡೆದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಕೃಷ್ಣ, ಕುರುಬ ಸಮುದಾಯದ ತಾಲೂಕು ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಕಾರ್ಯದರ್ಶಿ ಕೊತ್ತೇಗಾಲ ಬಸವರಾಜು,ಪುರಸಭಾ ಸದಸ್ಯ ಟಿ.ಎಂ. ನಂಜುಂಡಸ್ವಾಮಿ, ಬಾದಾಮಿ ಮಂಜು,ನಂಜುಂಡಸ್ವಾಮಿ,ಮಾಜಿ ತಾ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ,ಕಸಾಪ ತಾಲೂಕು ಅಧ್ಯಕ್ಷ ಕನ್ನಡಪುಟ್ಟಸ್ವಾಮಿ,ಅಮಾಸೆಗೌಡ,ಬಣ್ಣ ಬಸವಣ್ಣ,ಸೋಮುದಾದ,ಅಶ್ವಿನ್ ಕುಮಾರ್ ಇತರರು ಹಾಜರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…