ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ನಡೆದಿದೆ.
ಮೈಸೂರಿನ ಜೆಪಿ ನಗರದ ಚಂದ್ರು (38), ನಡುಕಲು ಮೊಳೆ ಗ್ರಾಮದ ಶೀಲಾ (35) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.
ಸ್ಕೂಟರ್‌ನಲ್ಲಿ ಚಂದ್ರು, ಶೀಲಾ ಸಂತೇಮರಹಳ್ಳಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚುಂಚನಹಳ್ಳಿ ಕಡೆಗೆ ಹೋಗುತ್ತಿದ್ದ ಗೊಬ್ಬರ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಯುತ್ತಿದ್ದಂತೆ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಲಾರಿ ಇಬ್ಬರ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರಘು, ಸಿಪಿಐ ಚಂದ್ರಶೇಖರ್, ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಎಸ್.ಬಿ ರಮೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…