ಮೈಸೂರು

ಅಪಘಾತ : ಕೊಲ್ಕತ್ತಾ ಮೂಲದ ಪ್ರವಾಸಿ ಸಾವು

ಹುಣಸೂರು : ವ್ಯಕ್ತಿಯೊಬ್ಬರು ಬೈಕ್‌ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ರೋಡೆಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ.

ನಗರದಿಂದ ಮಡಿಕೇರಿಗೆ ತೆರಳುತ್ತಿದ್ದ ಕೊಲ್ಕತ್ತಾ ನಿವಾಸಿ ಮಕ್ಸೂದ್ ಅಹ್ಮದ್ ಖಾನ್‌ರವರ ಹಿರಿಯ ಮಗ ಆಸಿಮ್ ಖಾನ್ (೩೦) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಶನಿವಾರ ಸಂಜೆ ಕೆಲಸ ಮುಗಿಸಿಕೊಂಡು ಬೆಂಗಳೂರಿಂದ ಮಡಿಕೇರಿ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಯಶವತಪುರ ಹೆದ್ದಾರಿ ರಸ್ತೆ ಮುಂಭಾಗ ಈ ದುರ್ಘಟನೆ ಸಂಭವಿಸಿದೆ.

ಹುಣಸೂರು ಫ್ರೀಡಂ ಯುವಕರ ಸಮಿತಿಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಂತರ ಕೊಲ್ಕತ್ತಾದಿಂದ ಬಂದ ಮೃತರ ಸಂಬಂಧಿಕರಿಗೆ ಶವವನ್ನು ರವಾನಿಸಲಾಯಿತು
ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

22 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

49 mins ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

1 hour ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

5 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

5 hours ago