ಪಿರಿಯಾಪಟ್ಟಣ: ಶಾಲಾ ವಿದ್ಯಾರ್ಥನಿಯನ್ನು ಗರ್ಭಿಣಿ ಮಾಡಿದ ಆರೋಪದಿಂದ ಹೆದರಿ ಯುವಕನೋರ್ವ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಯುವಕ ವಾಯ್ಸ್ ನೋಟ್ ಮಾಡಿದ್ದಾನೆ. ವಿದ್ಯಾರ್ಥಿನಿ ಗರ್ಭಿಣಿ ಆಗಿರುವುದಕ್ಕೆ ನಾನು ಕಾರಣನಲ್ಲ. ನನಗೂ ಆಕೆಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾನೆ.
ಇದನ್ನು ಓದಿ: ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ
ಅಕ್ಟೋಬರ್.31ರಂದು ವಾಯ್ಸ್ ನೋಟಸ್ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಟ್ಟದ ತುಂಗಾ ಗ್ರಾಮದ ನಾಲೆಯ ಬಳಿ ಬೈಕ್, ಚಪ್ಪಲಿ, ಮೊಬೈಲ್ ಬಿಟ್ಟು ನಾಲೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡಿಎನ್‌ಎ ಟೆಸ್ಟ್ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಒತ್ತಾಯಿಸಿದ್ದಾನೆ.




