ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ (75) ಷಣ್ಮುಖ (65) ರನ್ನ ಕೊಲೆ ಮಾಡಿದ್ದ.
ಹುಣಸೂರಿನ ಎಸ್.ಎಸ್. ಸಾಮಿಲ್‌ನಲ್ಲಿ ಕೊಲೆ ನಡೆದಿತ್ತು.ಕೊಲೆ ಮಾಡಿದ ನಂತರ ವೆಂಕಟೇಶ್ ಬಳಿ ಇದ್ದ 485 ರೂಪಾಯಿ ತೆಗೆದುಕೊಂಡು ಹೋಗಿದ್ದ. ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದ ದೃಶ್ಯ ಸಾಮಿಲ್ ಸಿ.ಸಿ ಕ್ಯಾಮರಾ ದಲ್ಲಿ ಸೆರೆಯಾಗಿತ್ತು.
ಶ್ವಾನಗಳು ಸಹಾ ಸಾಮಿಲ್ ನಲ್ಲಿ ಸುತ್ತಾಡಿ ಅಭಿ ಮನೆ ಬಳಿ ನಿಂತಿತ್ತು.ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಈತ ದಿನ ನಿತ್ಯ ಗಂಜಾ, ಸೆಲ್ಯೂಷನ್ ಸೇದಿ ಜನರಿಗೆ ಕಿರುಕುಳ ಜಾತ್ರೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…