ಮೈಸೂರು : ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ ಬುಧವಾರ (ಮೇ 24) ಸಂಜೆ ಎಫ್‌ಐಆರ್ ದಾಖಲಿಸುವಂತೆ ಮತ್ತೊಮ್ಮೆ ದೂರು ಸಲ್ಲಿಸಿದರು.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಅಶ್ವಥ್ ನಾರಾಯಣ್ ಹೇಳಿದ್ದೇನು? : ಫೆಬ್ರವರಿ 15 ರಂದು ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು ಎಂದು ಹೇಳಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…