ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ.
ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದ ಲಕ್ಷ್ಮೀ ಎಂಬ ಯುವತಿಯೂ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ ಬಿದ್ದಿದ್ದಳು. ಈ ಪ್ರೀತಿಗೆ ಘನವಂತ್ ಎಂಬಾತ ಸಪೋರ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ತಂದೆ ಚೆಲುವರಾಜು ಅವರು ದ್ವೇಷದಿಂದ ಘನವಂತ್ ಸಿಕ್ಕಿದಾಗೆಲ್ಲಾ ಹಲ್ಲೆ ಮಾಡುತ್ತಿದ್ದರು. ಅಲ್ಲದೇ ಘನವಂತ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ತಡೆದು ಹಿಗ್ಗಾಮುಗ್ಗ ಥಳಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ಈ ಥಳಿತದಿಂದ ಹಲ್ಲೆಗೊಳಗಾದ ಘನವಂತ್‌ನನ್ನು ಹುಣಸೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಇನ್ನೂ ಚೆಲುವರಾಜ್ ಕುಟುಂಬದಿಂದ ರಕ್ಷಣೆ ಬೇಕೆಂದು ಪೋಲಿಸರ ಮೊರೆ ಹೋದ ಘನವಂತ್, ಹುಣಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಚೆಲುವರಾಜು, ಮಂಜುಳಾ, ಲೋಕೇಶ್, ಪರಶುರಾಮ್, ಹಣಮಂತ, ಯುವತಿ ಲಕ್ಷ್ಮಿ , ದರ್ಶನ್, ಯಶು ಸೇರಿದಂತೆ 10 ಮಂದಿ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…