ನಂಜನಗೂಡು : ಇತ್ತೀಚೆಗೆ ಮಳವಳ್ಳಿಯಲ್ಲಿ ಶಾಲಾ ಬಾಲಕಿಗೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆ ಅಧ್ಯಕ್ಷರು ಮತ್ತು ಮುಖಂಡರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ ಮಾತನಾಡಿ ಜನ ಸಮೂಹ ತಲೆತಗ್ಗಿಸುವಂತಹ ವಿಚಾರ ಸರ್ಕಾರ ಕಠಿಣ ಶಿಕ್ಷೆಗೆ ಮುಂದಾಗಬೇಕೆಂದರು ಹಾಗೂ ಒಬ್ಬ ಶಿಕ್ಷಕನಾಗಿ ಈ ರೀತಿ ನಡೆದುಕೊಂಡಿರುವುದನ್ನು ಖಂಡಿಸುತ್ತೇವೆ. ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಹ ರೀತಿ ಮಾಡಿದರೆ ಮುಂದೇನು ಗತಿ ಎಂಬುದೇ ಆತಂಕ ಉಂಟಾಗಿದೆ.
ಈತನನ್ನು ಗಲ್ಲಿಗೇರಿಸಬೇಕು ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ಅತ್ಯಾಚಾರ ಕೊಲೆ ಮತ್ತು ದೌರ್ಜನ್ಯಗಳು ನಿಲ್ಲಬೇಕು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದರು
.
ಈ ಸಂದರ್ಭದಲ್ಲಿ ಮೆಲ್ಲಹಳ್ಳಿ ನಾರಾಯಣ ರೈತ ಮುಖಂಡ ರಘು ಸೇರಿದಂತೆ ನೂರಾರು ಮುಖಂಡರು ಕಾರ್ಯಕರ್ತರು ಭಾಗವಹಿಸಿದರು
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…