ಮೈಸೂರು: ಇಲ್ಲಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಏಪ್ರಿಲ್ 22ರಂದು ಸಂಜೆ 6.30 ಗಂಟೆಗೆ ‘ಮುದಿ ದೊರೆ ಮತ್ತು ಮೂವರು ಮಕ್ಕಳು’ ನಾಟಕ ಪ್ರದರ್ಶನವಿದೆ.
ಬೆಂಗಳೂರಿನ ಕಲಾಗಂಗೋತ್ರಿ ಅಭಿನಯಿಸುವ ಹೊಸ ನಾಟಕವಿದು. ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ರಚನೆಯ ಈ ನಾಟಕವನ್ನು ಮಂಗಳಾ ಎನ್. ನಿರ್ದೇಶಿಸಿದ್ದಾರೆ.
ಷೇಕ್ಸ್‌ಪಿಯರ್ ನ ‘ಕಿಂಗ್ ಲಿಯರ್’ ನಾಟಕ ಆಧರಿಸಿ ಎಚ್.ಎಸ್.ವೆಂಕಟೇಶ ಮೂರ್ತಿ ಈ ನಾಟಕ ರಚಿಸಿದ್ದಾರೆ. ಕಲಾಗಂಗೋತ್ರಿ ತಂಡದ 80 ವರ್ಷ ವಯಸ್ಸಿನ ಶ್ರೀನಿವಾಸ್ ಮೇಷ್ಟ್ರು ಈ ನಾಟಕದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನುವುದು ವಿಶೇಷ.
ಕಲಾಗಂಗೋತ್ರಿಗೆ 50 ವರ್ಷವಾದ ಪ್ರಯುಕ್ತ ಸುವರ್ಣ ಸಂಭ್ರಮವೆಂದು ಈ ನಾಟಕ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಕಲಾಗಂಗೋತ್ರಿಯ ಸಂಚಾಲಕರಾದ ಡಾ.ಬಿ.ವಿ.ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…
ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…