ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ ಡಾಲಿ ಧನಂಜಯ್ ಅವರು ಲಗ್ನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಂಜುಂಡೇಶ್ವರ, ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ನಾರಾಯಣಸ್ವಾಮಿ, ಸುಬ್ರಹ್ಮಣ್ಯ ದೇವಾಲಯಗಳ ಸುತ್ತ ಪ್ರದಕ್ಷಿಣೆ ಹಾಕಿದರು.
ಈ ವೇಳೆ ಮಾತನಾಡಿದ ಡಾಲಿ ಧನಂಜಯ್ ಅವರು, ಇಂದು ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದೇನೆ. ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರಿಗೆ ಮದುವೆಎಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದೇನೆ ಎಂದು ತಿಳಿಸಿದರು.
ಇನ್ನು ದೇವಾಲಯದ ಬಳಿ ನಟ ಡಾಲಿ ಧನಂಜಯ್‌ರನ್ನು ಕಂಡು ಅವರ ನೂರಾರು ಅಭಿಮಾನಿಗಳು ದೇವಾಲಯದ ಬಳಿ ಆಗಮಿಸಿದ್ದರು. ಈ ವೇಳೆ ನೆಚ್ಚಿನ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ಈ ವೇಳೆ ಶಾಸಕ ದರ್ಶನ್ ಧ್ರುವನಾರಾಯಣ್ ಸೇರಿದಂತೆ ಹಲವರು ನಟ ಡಾಲಿ ಧನಂಜಯ್‌ಗೆ ಸಾಥ್ ನೀಡಿದರು.





