ಮೈಸೂರು : ಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. ‘ಡೆವಿಲ್’ ಸಿನಿಮಾ ಚಿತ್ರೀಕರಣದ ವೇಳೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ದರ್ಶನ್ ಕೈಗೆ ಶಸ್ತ್ರಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ದರ್ಶನ್ ಅಭಿಮಾನಿ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೊ ವೈರಲ್ ಆಗುತ್ತಿದೆ. ಫೋಟೊ ಅಭಿಮಾನಿಗಳು ಬೇಗ ಗುಣಮುಖರಾಗಿ ಬಾಸ್ ಎಂದು ಪ್ರಾರ್ಥಿಸುತ್ತಿದ್ದಾರೆ.





