ಮೈಸೂರು: ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಹಿನ್ನಲೆ ಕುಟುಂಬಸ್ಥರಾದ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಅವರು ಮೈಸೂರಿನಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಗರದ ಎಚ್ ಡಿ ಕೋಟೆ ರಸ್ತೆಯ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕಕ್ಕೆ ಮುಂಜಾನೆಯಿಂದಲೇ ಅಭಿಮಾನಿಗಳೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.
ಈ ವೇಳೆ ವಿಷ್ಣುವರ್ಧನ್ ನೆನಪಿಗೆ ನೂತನ ವರ್ಷದ ಕ್ಯಾಲೆಂಡರ್ ಸಹ ಬಿಡುಗಡೆ ಮಾಡಲಾಯಿತು. ಅಭಿಮಾನಿ ಸಂಘದ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.





