ನಂಜನಗೂಡು: ರಾಜ್ಯದಲ್ಲಿ ಎಕ್ಕ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಟ ಯುವರಾಜ್‌ಕುಮಾರ್ ಅವರಿಂದು ನಂಜನಗೂಡಿನ ಹುಲ್ಲಹಳ್ಳಿಯ ವಿನಾಯಕ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.
ಚಿತ್ರಮಂದಿರಕ್ಕೆ ಭೇಟಿ ನೀಡಿದ ಯುವರಾಜ್‌ಕುಮಾರ್‌ಗೆ ಅಭಿಮಾನಿಗಳು ಹೂವಿನ ಮಳೆಯನ್ನೇ ಸುರಿಸಿದರು. ಈ ವೇಳೆ ಯುವ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ರಾಜ್ಯಾದ್ಯಂತ ಯುವ ಅಭಿನಯದ ಎಕ್ಕ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಯುವರಾಜ್ ಕುಮಾರ್ ಅಭಿಮಾನಿಗಳ ಖುಷಿಯನ್ನು ಹೆಚ್ಚು ಮಾಡಿದೆ. ಈ ಹಿನ್ನೆಲೆಯಲ್ಲಿ ಯುವ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿದ್ದು, ಅಭಿಮಾನಿಗಳಿಗೆ ಖುಷಿ ಕೊಡುತ್ತಿದ್ದಾರೆ.





