ಮೈಸೂರು

ನಟಿ ವಿದ್ಯಾ ಹತ್ಯೆ ಆರೋಪಿ ನಂದೀಶ್‌ ಬಂಧನ

ಮೈಸೂರು: ಭಜರಂಗಿ, ವೇದ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹಾಗೂ ರಾಜಕಾರಣಿ ವಿದ್ಯಾ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್‌ನನ್ನು ಪೊಲೀಸರು ಬುಧವಾರ(ಮೇ.೨೨) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ನಟಿ ವಿದ್ಯಾ ೨೦೧೮ ರಲ್ಲಿ ನಂದೀಶ್‌ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಆರಂಭದ ಕೆಲ ದಿನಗಳಿಂದಲೂ ಇಬ್ಬರ ಮನಸ್ತಾನ ಏರ್ಪಟ್ಟು, ಇಬ್ಬರು ಆಗಾಗ್ಗೆ ಜಗಳವಾಡುತ್ತಿದ್ದರು. ವಿಚ್ಚೇದನಕ್ಕೂ ಸಹ ಪ್ರಯತ್ನಸಿದ್ದರು ಆದರೆ ಪೋಷಕರು ಬುದ್ಧಿವಾದ ಹೇಳಿ ಇಬ್ಬರನ್ನೂ ಒಂದು ಮಾಡಿದ್ದರು. ಆದರೆ ಜಗಳ ಮಾತ್ರ ಮುಂದುವರೆಯುತ್ತಲೇ ಇತ್ತು.

ವಿದ್ಯಾ ಸೋಮವಾರ(ಮೇ.೨೦) ತಡರಾತ್ರಿ ತಿ.ನರಸೀಪುರ ತಾಲ್ಲೂಕಿನ ತುರಗನೂರಿನಲ್ಲಿರುವ ಪತಿಯ ಮನೆಗೆ ತೆರಳಿದ್ದಾಗ ಇಬ್ಬರ ನಡುವೆ ಜಗಳವಾಗಿ, ಆರೋಪಿಯು ಪತ್ನಿಯ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಅಲ್ಲಿಂದ ಮಂಡ್ಯದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳಿದ್ದ ಆರೋಪಿ, ನಂತರ ಬೆಂಗಳೂರಿನ ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸರ ತಂಡ ಆತನನ್ನು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿದ್ಯಾ ಭಜರಂಗಿ, ವೇದ, ಜೈ ಮಾರುತಿ ೮೦೦, ಅಜಿತ್‌ ಇನ್ನೂ ಕೆಲವು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದರು. ರಾಜಕೀಯದಲ್ಲೂ ಸಕ್ರಿಯರಾಗಿದ್ದ ಇವರು ಮೈಸೂರು ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

6 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

40 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago