ಮೈಸೂರು

ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸಲು ನ.30ಕ್ಕೆ ಪಾಲಿಕೆ ಅದಾಲತ್

ನ.14ರಿಂದ ೧೯ ರವರೆಗೆ ಸಲ್ಲಿಸಿದ ಅರ್ಜಿಗಳಿಗೆ ಡಿ.27ರೊಳಗೆ ಇತ್ಯರ್ಥ

ಮೈಸೂರು: ಮಹಾನಗರ ಪಾಲಿಕೆಯಿಂದ ದೊರೆಯುವ ನಾಗರಿಕ ಸನ್ನದುಗಳು, ನಿವೇಶನ,ಮನೆ ಖಾತೆ ವರ್ಗಾವಣೆ, ಸೇವಾ ಸೌಲಭ್ಯಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ಅವುಗಳ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರಕ್ಕೆ ಮತ್ತು ಆಡಳಿತದಲ್ಲಿ ಸುಧಾರಣೆ, ಪಾರದರ್ಶಕತೆ ಆಡಳಿತವನ್ನು ತರಲು ನಗರಪಾಲಿಕೆ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಪೌರ ಶಿವಕುಮಾರ್ ತಿಳಿಸಿದರು. ನಗರಪಾಲಿಕೆ ಹಳೆಯ ಕೌನ್ಸಿಲ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 14ರಿಂದ 19ರವರೆಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ನ. 27ರೊಳಗೆ ಸಮಸ್ಯೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಇಲ್ಲಿ ಬಗೆಹರಿಯದ ಸಮಸ್ಯೆಯನ್ನು ನ.30 ರಂದು ಪಾಲಿಕೆ ಮುಖ್ಯ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಪರಿಹರಿಸಲಾಗುವುದು ಎಂದು ಹೇಳಿದರು. ಪಾಲಿಕೆ ಅದಾಲತ್‌ನಲ್ಲಿ ಹೊಸದಾಗಿ ವಾಸಕ್ಕೆ ನಿವೇಶನ ಅಥವಾ ಮನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಈ ಸಂಬಂಧ ಆಶ್ರಯ ಯೋಜನೆಯಡಿ ಅಧಿಕೃತ ಪ್ರಕಟಣೆ ಹೊರಡಿಸಿ ಅರ್ಜಿಗಳನ್ನು ಕರೆದಾಗ ಮಾತ್ರ ಅರ್ಜಿ ಸಲ್ಲಿಸಿಕೊಳ್ಳಬೇಕಾಗಿರುತ್ತದೆ. ಪಾಲಿಕೆ ಆದಾಲತ್ ಕಾರ್ಯಕ್ರಮದಲ್ಲಿ ಈಗಾಗಲೇ ವಲಯ ಕಚೇರಿಗಳಲ್ಲಿ ಅಥವಾ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಯಾವುದೇ ನಾಗರೀಕ ಸನ್ನದುಗಳನ್ನು ಅಥವಾ ಸಾರ್ವಜನಿಕ ಸೇವಾ ಸೌಲಭ್ಯಗಳನ್ನು ಕೋರಿ ಈ ಹಿಂದೆಯೇ, ಅರ್ಜಿದಾರರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದ್ದು, ಅನಗತ್ಯ ವಿಳಂಬ ಮಾಡಿದ್ದಲ್ಲಿ ಅಥವಾ ಹೊಸ ಸಾರ್ವಜನಿಕ ಸಮಸ್ಯೆಗಳು ಮತ್ತು ದೂರುಗಳೇನಾದರೂ ಇದ್ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಿದರು.

ಅರ್ಜಿ ಸಲ್ಲಿಸಿರುವ ಪ್ರಕರಣಗಳು: ನಿವೇಶನ, ಮನೆ ಖಾತಾ ವರ್ಗಾವಣೆ  ನೋಂದಣಿ ಪ್ರಕರಣಗಳು. ಮನೆ ನಿವೇಶನ ಕಂದಾಯ ನಿಗಧಿಗೆ ಅರ್ಜಿ ಸಲ್ಲಿಸಿರುವ ಪ್ರಕರಣಗಳು, ಆಶ್ರಯ ಯೋಜನೆಯಡಿ (ಚಾಮರಾಜ ನರಸಿಂಹರಾಜ, ಕೃಷ್ಣರಾಜ ಕ್ಷೇತ್ರ) ಈಗಾಗಲೇ ಮನೆ ಹಾಗೂ ನಿವೇಶನ ಮಂಜೂರಾಗಿದ್ದು ಸ್ವಾಧೀನ ಪತ್ರ, ಹಕ್ಕು ಪತ್ರ, ಹಕ್ಕು ಖುಲಾಸೆ ಪತ್ರ, ಖಾತೆ ನೋಂದಣಿ, ವರ್ಗಾವಣೆ ಕೋರಿ ಸಲ್ಲಿಸಿರುವ ಪ್ರಕರಣಗಳು. ಕಟ್ಟಡ ನಿರ್ಮಾಣ ನಕ್ಷೆ ಕೋರಿ, ಕಟ್ಟಡ ಪೂರ್ಣಗೊಂಡ ಪ್ರಮಾಣ ಪತ್ರ ಕೋರಿ (ಸಿ.ಆರ್ ) ವಾಣಿಜ್ಯ ಪರವಾನಗಿ ಕೋರಿ, ಜಾಹಿರಾತು ಪ್ರಕಟಣೆ ಫಲಕ ಅರ್ಜಿ, ಜನನ ಮತ್ತು ಮರಣ ಧೃಡೀಕರಣ ಕೋರಿ ಅರ್ಜಿ ಸಲ್ಲಿಸಬೇಕು ಎಂದು ವಿವರಿಸಿದರು. ಅರ್ಜಿ ಸ್ವೀಕಾರಕ್ಕೆ ಪಾಲಿಕೆ ಕಚೇರಿಯಲ್ಲಿ ಐದು ಕೌಂಟರ್‌ಗಳನ್ನು ತೆರೆಯಲಾಗುವುದು. ಅರ್ಜಿ ಸಲ್ಲಿಕೆ ಸಂಬಂಧ ಹೆಚ್ಚಿನ ಮಾಹಿತಿಗೆ ಕಂಟ್ರೋಲ್ ರೂಂ ಮೊ.ಸಂ 944984196. ಸಂಪರ್ಕಿಸುವಂತೆ ತಿಳಿಸಿದರು. ಉಪ ಮಹಾಪೌರರಾದ ಡಾ.ಜಿ.ರೂಪಾ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ ,ಹೆಚ್ಚುವರಿ ಆಯುಕ್ತರಾದ ಎಂ.ಕೆ.ಸವಿತಾ, ಸೋಮಶೇಖರ್ ಜಿಗಣಿ, ಅಧೀಕ್ಷಕ ಅಭಿಯಂತರ ಮಹೇಶ್ ಮುಂತಾದವರು ಹಾಜರಿದ್ದರು.

ಶೀಘ್ರ ಗುಂಡಿ ಮುಚ್ಚುತ್ತೇವೆ: ಶಿವಕುಮಾರ್

ಮೈಸೂರು: ನಗರ ಪ್ರದೇಶ ವ್ಯಾಪ್ತಿಯಲ್ಲಿ ನ.25ರೊಳಗೆ ಗುಂಡಿ ಮುಚ್ಚುವ ಗುರಿ ಹೊಂದಲಾಗಿದ್ದು, ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲು ಸಾಧ್ಯವಾಗಲಿಲ್ಲ. ನಾಳೆಯಿಂದಲೇ ಗುಂಡಿ ಮುಚ್ಚುವ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಶಿವಕುಮಾರ್ ತಿಳಿಸಿದರು. ಪಾಲಿಕೆ ಕಚೇರಿ ಹಿಂಭಾಗದ ರಸ್ತೆ ಸೇರಿದಂತೆ ನಗರದ ಮುಖ್ಯರಸ್ತೆಗಳನ್ನು ಗುಂಡಿ ಮುಚ್ಚುತ್ತೇವೆ. ಆಧ್ಯತೆ ಮೇರೆಗೆ ಈ ಕೆಲಸ ಪ್ರಾರಂಭಿಸಿ ಶೀಘ್ರ ಪೂರ್ಣಗೊಳಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಾರಂಪರಿಕ ಕಟ್ಟಡಗಳಲ್ಲಿನ ಗೆಜ್ಜಲು ಮತ್ತು ಹೆಗ್ಗಣಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ. ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತಂತೆ ತಜ್ಞರೊಂದಿಗಿನ ಸಭೆಯ ಬಳಿಕ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ.ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಜನಪ್ರತಿನಿಧಿಗಳ ಸಹಕಾರದೊಂದಿಗೆ ಪ್ರಸ್ತಾವನೆ ಸಿದ್ಧಪಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಗ್ಯಾಸ್‌ಪೈಪ್ ಲೈನ್ ವಿಚಾರವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ಈಗಾಗಲೇ ಮೂರು ವಾರ್ಡ್‌ಗಳಲ್ಲಿ ಗ್ಯಾಸ್‌ಪೈಪ್ ಲೈನ್ ಅಳವಡಿಕೆ ಕಾರ್ಯ ಮುಗಿದಿದೆ. ಮೊದಲ ಹಂತದಲ್ಲಿ ಪಾಲಿಕೆಯಿಂದ 50 ಕಿ.ಮೀ. ಗ್ಯಾಸ್‌ಪೈಪ್ ಲೈನ್ ಅಳವಡಿಕೆಗೆ ಅನುಮತಿ ಪಡೆಯಲಾಗಿತ್ತು.45 ಕಿ.ಮೀ. ಪೂರ್ಣಗೊಂಡಿದೆ. ಎರಡನೇ ಹಂತದ ಕಾಮಗಾರಿಗೆ ಅರ್ಜಿ ಸಲ್ಲಿಸಿ ಶುಲ್ಕ ಕಟ್ಟಿದರೆ ಅನುಮತಿ ನೀಡುತ್ತೇವೆ ಎಂದು ಹೇಳಿದರು.

 

ನಗರದ ಟಿ.ಕೆ.ಬಡಾವಣೆಯಲ್ಲಿನ ಐಬಿ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಮತ್ತು ಮಾದಪ್ಪ ಮನೆಗಳ ನಡುವೆ ಸೆಟ್ ಬ್ಯಾಕ್ ಜಾಗ ಬಿಡದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಮಾದಪ್ಪ ಅವರಿಗೆ ನ. 2ರಂದು ಅಂತಿಮ ನೋಟೀಸ್ ನೀಡಲಾಗಿತ್ತು. ನೋಟೀಸ್‌ಗೆ ಉತ್ತರಿಸಿಲು 10 ದಿನಗಳ ಸಮಯವಿತ್ತು. ನಿಯಮದ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಹತ್ತು ದಿನಗಳೊಳಗೆ ಉತ್ತರಿಸುವ ಜತೆಗೆ ಕಾನೂನುಬಾಹಿರವಾಗಿ ಕಟ್ಟಿರುವುದನ್ನು ನೆಲಸಮಗೊಳಿಸಬೇಕು. ಇಲ್ಲದಿದ್ದರೆ ಪಾಲಿಕೆ ವತಿಯಿಂದ ಕಾರ್ಯಾಚರಣೆ ನಡೆಸುತ್ತೇವೆ. ಇನ್ನು ಎರಡು ದಿನಗಳ ಕಾಲ ಸಮಯ ಇರುವುದರಿಂದ ಕಾದು ನೋಡುತ್ತೇವೆ

-ಜಿ.ಲಕ್ಷ್ಮೀಕಾಂತರೆಡ್ಡಿ, ಆಯುಕ್ತ, ನಗರಪಾಲಿಕೆ

ಮೈಸೂರು ನಗರಪಾಲಿಕೆ ಹಳೆಯ ಕೌನ್ಸಿಲ್ ಸಭಾಂಗಣದಲ್ಲಿ ಮಹಾಪೌರ ಶಿವಕುಮಾರ್ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಉಪ ಮಹಾಪೌರರಾದ ಡಾ.ಜಿ.ರೂಪಾ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ ,ಹೆಚ್ಚುವರಿ ಆಯುಕ್ತರಾದ ಎಂ.ಕೆ.ಸವಿತಾ, ಸೋಮಶೇಖರ್ ಜಿಗಣಿ, ಅಧೀಕ್ಷಕ ಅಭಿಯಂತರ ಮಹೇಶ್ ಹಾಜರಿದ್ದರು

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago