Mysore
17
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಮೈಸೂರು: ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಪರ ಜಿಲ್ಲಾಧಿಕಾರಿ

ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ , ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ

ಮೈಸೂರು:  ಅಪರ ಜಿಲ್ಲಾಧಿಕಾರಿ  ಡಾ.ಪಿ. ಶಿವರಾಜು ಅವರು ಶನಿವಾರ  ಮೈಸೂರು ತಾಲೂಕು ಸರಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗಾಗಿ ಹಾಗೂ ರೋಗಿಗಳಿಗೆ ಸರ್ಕಾರಿ ಸೇವೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಯಿತು‌.

ಪರಿಶೀಲನೆ ಸಮಯದಲ್ಲಿ ಹಾಜರಿದ್ದ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಚರ್ಚೆ ನಡೆಸಲಾಯಿತು. ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ ಮತ್ತು ಉಪಚಾರ ಮತ್ತು ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ ನೀಡಲಾಯಿತು.

ಈ ಸಂದರ್ಭದಲ್ಲಿ THO ಡಾ. ಪುಟ್ಟತಾಯಮ್ಮ ಹಾಗು ವೈದ್ಯರುಗಳು ಹಾಜರಿದ್ದರು.

Tags:
error: Content is protected !!