ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ.
ಕೂಂಬಿಂಗ್ ಕಾರ್ಯಾಚರಣೆ ವೇಳೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಜಾಕಹಳ್ಳಿ ಗ್ರಾಮದಲ್ಲಿ ಹುಲಿ ಮರಿ ಕಾಣಿಸಿಕೊಂಡಿದೆ.
ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹುಲಿ ಇರುವಿಕೆ ಖಚಿತಪಡಿಸಿಕೊಂಡಿರುವ ಸ್ಥಳಗಳಲ್ಲಿ ತುರ್ತು ಸಂದೇಶ ರವಾನೆ ಮಾಡಿ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿಗೆ ಕರೆ ಮಾಡಿ ಎಂದು ಮನವಿ ಮಾಡಲಾಗಿದೆ.





